+91 9611100374|admin@indiaforyou.in

ಕಂಡು ಕಂಡು ನೀ ಎನ್ನ

Home//ಕಂಡು ಕಂಡು ನೀ ಎನ್ನ

ಕಂಡು ಕಂಡು ನೀ ಎನ್ನ

ಕಂಡು ಕಂಡು ನೀ ಎನ್ನ ಕೈ ಬಿಡುವರೇ ಕೃಷ್ಣ
ಪುಂಡರೀಕಾಕ್ಷ ಶ್ರೀಪುರುಷೋತ್ತಮ ದೇವ||
ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ
ನಿಂದೆಯಲಿ ನೊಂದೆ ನಾನು ನೀರಜಾಕ್ಷ|
ಬಂಧು ಬಳಗವು ನೀನೆ ತಂದೆತಾಯಿಯು ನೀನೆ
ಎಂದೆಂದಿಗೂ ನಿನ್ನ ನಂಬಿದೆನೋ ಶ್ರೀಹರಿಯೆ||

ಕ್ಷಣವೊಂದೆ ಯುಗವಾಗಿ ತೃಣಕಿತ ಕಡೆಯಾಗಿ
ಎಣಿಸಲಾರದ ಭವದಿ ನೊಂದೆ ನಾನು|
ಸನಕಾದಿ ಮುನಿವಂದ್ಯ ವನಜಸಂಭವಜನಕ
ಫಣಿಶಾಯಿ ಪ್ರಹ್ಲಾದಗೊಲಿದ ಶ್ರೀಹರಿಯೆ||

ಭಕ್ತವತ್ಸಲನೆಂಬೊ ಬಿರುದು ಪೊತ್ತಮೇಲೆ
ಭಕ್ತರಾಧೇನನಾಗಿರಬೇಡವೆ|
ಮುಕ್ತಿದಾಯಕ ನಮ್ಮ ಪುರಂದರವಿಟ್ಠಲನೆ
ಶಕ್ತ ನೀನಹುದೆಂದು ನಂಬಿದೆನೋ ಶ್ರೀಹರಿಯೆ||

—ಪರಂದರದಾಸ

By | 2015-04-13T12:44:01+00:00 April 13th, 2015||0 Comments

About the Author:

Leave A Comment