+91 9611100374|admin@indiaforyou.in

ಭಾಗ್ಯದ ಲಕ್ಷ್ಮಿ ಬಾರಮ್ಮ

Home//ಭಾಗ್ಯದ ಲಕ್ಷ್ಮಿ ಬಾರಮ್ಮ

ಭಾಗ್ಯದ ಲಕ್ಷ್ಮಿ ಬಾರಮ್ಮ

ಭಾಗ್ಯದ ಲಕ್ಷ್ಮಿ ಬಾರಮ್ಮ| ನಮ್ಮಮ್ಮ ನೀ
ಸೌಭಾಗ್ಯದ ಲಕ್ಷ್ಮಿ ಬಾರಮ್ಮ||

ಗೆಜ್ಜೆ ಕಾಲ್ಗಳ ಧ್ವನಿಯನು ತೋರುತ
ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ
ಸಜ್ಜನ ಸಾಧು ಪೂಜ್ಜೆಯ ಮೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ||

ಕನಕವಷ್ಟಿಯ ಕರೆಯುತ ಬಾರೆ
ಮನಕೆ ಮಾನವ ಸಿದ್ಧಿಯ ತೋರೆ
ದಿನಕರಕೋಟಿ ತೇಜದಿ ಹೊಳೆಯುವ
ಜನಕರಾಯನ ಕುಮಾರಿ ಬೇಗ||

ಅತ್ತಿತ್ತಗಲದೆ ಭಕ್ತರ ಮನೆಯಲಿ
ನಿತ್ಯಮಹೋತ್ಸವ ನಿತ್ಯ ಸುಮಂಗಳ
ಸತ್ಯವ ತೋರುವ ಸಾಧುಸಜ್ಜನರ
ಚಿತ್ತದಿ ಹೊಲೆವ ಪುತ್ಥಳಿ ಬೊಂಬೆ||

ಸಂಖ್ಯೆಯಿಲ್ಲದ ಭಾಗ್ಯವ ಕೊಟ್ಟು
ಕಂಕಣ ಕೈಯನು ತಿರುವುತ ಬಾರೆ
ಕುಂಕುಮಾಕಿತೆ ಪಂಕಜಲೋಚನೆ
ವೆಂಕಟರಮಣನ ಬಿಂಕದ ರಾಣಿ||

ಸಕ್ಕರೆ ತುಪ್ಪ ಕಾಲುವೆ ಹರಿಸಿ
ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಅಳಗಿರಿರಂಗನ
ಚೊಕ್ಕ ಪುರಂದರ ವಿಟ್ಠಲನ ರಾಣಿ||

—ಪುರಂದರದಾಸ

By | 2015-04-17T09:48:38+00:00 April 17th, 2015||0 Comments

About the Author:

Leave A Comment