MAVINA CHITRANNA ಮಾವಿನ ಚಿತ್ರಾನ್ನ
ನಮ್ಮ ಮನೆಯಲ್ಲಿ ಯುಗಾದಿ ಹಬ್ಬದ ದಿನ ತಪ್ಪದೆ ಮಾಡುವ ವಿಧಾನ ಇಲ್ಲಿದೆ! ಮಾಡುವ ವಿಧಾನ:- 1 ಚಿಕ್ಕ ತೋತಾಪುರಿ ಮಾವಿನ ಕಾಯಿ ತುರಿದಿಡಿ. 1/2 ಹೋಳು ತೆಂಗಿನ ಕಾಯಿ ತುರಿದಿಡಿ. 10 ರಿಂದ 12 ಬ್ಯಾಡಗಿ ಮೆಣಸಿನಕಾಯಿ ಹುರಿದು ಪುಡಿ ಮಾಡಿಡಿ. ಮೇಲೆ ಹೇಳಿರುವ ಮೂರನ್ನು ಸ್ವಲ್ಪ ಉಪ್ಪು ಹಾಕಿ, ನೀರು ಹಾಕದೆ ಚಟ್ನಿಯ ಹಾಗೆ ರುಬ್ಬಿಡಿ. ಬಾಣಲೆಯಲ್ಲಿ ಎಣ್ಣೆ ಹಾಕಿ ಸ್ವಲ್ಪ ಕಡಲೇ ಬೀಜ ಕರಿದು ತೆಗೆದಿಡಿ. ಅದೇ ಬಾಣಲೆಯಲ್ಲಿ ಸಾಸಿವೆ, ಕಡಲೇ ಬೇಳೆ, [...]